ದಿಗಂತ ವರದಿ ಮಡಿಕೇರಿ:
ಮನೆಯಿಂದ ಹೊರಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ.
ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರನ್ನು ಕಾತಾಯಿ(72) ಎಂದು ಗುರುತಿಸಲಾಗಿದೆ. ಚೆನ್ನಯ್ಯನಕೋಟೆ ಗ್ರಾಮದಲ್ಲಿರುವ ತನ್ನ ಮಗನ ಮನೆಯಿಂದ ಬೆಳಗ್ಗೆ ಹೊರಬರುತ್ತಿದ್ದಂತೆ ಕಾಡಾನೆ ದಾಳಿ ನಡೆಸಿದ್ದು, ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ವಿಷಯ ತಿಳಿದ ಗ್ರಾಮಸ್ಥರು ಘಟನಾ ಸ್ಥಳದಲ್ಲಿ ಜಮಾಯಿಸುವುದರೊಂದಿಗೆ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ