ಹೊಸದಿಗಂತ ವರದಿ, ಮದ್ದೂರು :
ಮಿನಿ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅರೆಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾದಮ್ಮ (68) ಮೃತ ಮಹಿಳೆ. ಈಕೆ ಅರೆಚಾಕನಹಳ್ಳಿ ಗ್ರಾಮದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡುಕೊತ್ತನಹಳ್ಳಿ ಗ್ರಾಮದಿಂದ ಬಂದ ಮಿನಿಟೆಂಪೋ ಮಹಿಳೆಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ತೀವ್ರ ರಕ್ತಸ್ರಾವದಿಂದ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.