ದಿ ಕೇರಳ ಸ್ಟೋರಿ ಸಿನಿಮಾ ವಿಚಾರವಾಗಿ ಗಲಾಟೆ, ಪ್ರಿಯಕರನ ವಿರುದ್ಧ ಎಫ್‌ಐಆರ್ ದಾಖಲಿಸಿದ ಯುವತಿ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತನ್ನ ಪ್ರಿಯತಮೆಯ ಮೇಲೆ ಅತ್ಯಾಚಾರ ಮಾಡಿ ಧರ್ಮ ಪರಿವರ್ತನೆಗೆ ಒತ್ತಡ ಹೇರಿದ ಆರೋಪದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ 23 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾದ “ದಿ ಕೇರಳ ಸ್ಟೋರಿ” ಸಿನಿಮಾ ನೋಡಿದ ನಂತರ ಪ್ರೇಯಸಿ ಹಾಗೂ ಈತನ ನಡುವೆ ವಾಗ್ವಾದ ಶುರುವಾಗಿತ್ತು. ಇದಾದ ನಂತರ ಮಹಿಳೆ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಲವಂತದ ಧಾರ್ಮಿಕ ಮತಾಂತರವನ್ನು ನಿಷೇಧಿಸುವ ಕಾನೂನಿನಡಿಯಲ್ಲಿ ಬಂಧಿಸಲಾಗಿದೆ ಎಂದು ಖಜ್ರಾನಾ ಪೊಲೀಸ್ ಠಾಣೆ ಪ್ರಭಾರಿ ದಿನೇಶ್ ವರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅವರಿಬ್ಬರೂ ಆಪ್ತರಾದ ನಂತರ ಒಟ್ಟಿಗೆ ಇರಲು ಆರಂಭಿಸಿದ್ದರು, ಆದರೆ ಆ ಯುವಕ ತನ್ನನ್ನು ಧರ್ಮ ಬದಲಾಯಿಸುವಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಯುವತಿ ಆರೋಪ ಮಾಡಿದ್ದಾಳೆ.

“ತಾನು ಮತ್ತು ಆ ವ್ಯಕ್ತಿ ಇತ್ತೀಚೆಗೆ ‘ದಿ ಕೇರಳ ಸ್ಟೋರಿ’ ನೋಡಲು ಹೋಗಿದ್ದೆವು. ಚಲನಚಿತ್ರವನ್ನು ನೋಡಿದ ನಂತರ, ಇಬ್ಬರೂ ವಾದಿಸಿದ್ದು ಪ್ರಿಯಕರ ಅವಳ ಮೇಲೆ ಹಲ್ಲೆ ಮಾಡಿದ ನಂತರ ಅವಳನ್ನು ತೊರೆದನು. ಅದಾದ ಮೇಲೆ ಯುವತಿ ಮೇ 19 ರಂದು ಪೊಲೀಸರನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

12ನೇ ತರಗತಿವರೆಗೆ ಓದಿರುವ ಯುವಕ ನಿರುದ್ಯೋಗಿಯಾಗಿದ್ದು, ಸಂತ್ರಸ್ತ ಮಹಿಳೆ ಉನ್ನತ ಶಿಕ್ಷಣ ಮುಗಿಸಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಳೆ. ನಾಲ್ಕು ವರ್ಷಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓದುತ್ತಿದ್ದಾಗ ಇಬ್ಬರೂ ಆತ್ಮೀಯರಾದರು. ಯುವಕನ ವಿರುದ್ಧ ಬಂದಿರುವ ಎಲ್ಲಾ ಆರೋಪಗಳ ಬಗ್ಗೆ ವಿವರವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ದಿನೇಶ್ ವರ್ಮಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!