ಹೊಸದಿಗಂತ ವರದಿ, ಹುಬ್ಬಳ್ಳಿ
ನಗರದ ನೆಹರೂ ಮೈದಾನದ ಬಳಿಯ ಕೃಷ್ಣ ಭವನದ ಬಳಿ ಶನಿವಾರ ಬೆಳಗ್ಗೆ ಮಹಿಳೆಯೊಬ್ಬರು ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ. ನಗರದಲ್ಲಿ ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದ ದಾವಣಗೆರೆ ಮೂಲದ ಸುಮಾ ಮೃತ ದುರ್ದೈವಿ. ಘಟನೆ ನಡೆದ ತಕ್ಷಣವೇ ಕಾರ್ಯಾಚರಣೆಗಿಳಿದ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರ್.ಟಿ. ಬಳ್ಳಾರಿ ಎಂಬಾತ ಸೆರೆಸಿಕ್ಕ ಆರೋಪಿ. ಘಟನಾ ಸ್ಥಳಕ್ಕೆ ಡಿಸಿಪಿ, ಎಸಿಪಿ ಹಾಗೂ ಶಹರ ಠಾಣೆ ಇನ್ಸಪೆಕ್ಟರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ