Wednesday, January 7, 2026

ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ: ಮೃತ ರಂಜಿತಾ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಶಿವರಾಮ ಹೆಬ್ಬಾರ್

ಹೊಸದಿಗಂತ ವರದಿ, ಯಲ್ಲಾಪುರ:

ಪಟ್ಟಣದ ಕಾಳಮ್ಮನಗರದಲ್ಲಿ ನಡೆದ ಭೀಕರ ಹತ್ಯಾ ಪ್ರಕರಣದಲ್ಲಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಂಜಿತಾ ಬನಸೋಡೆ ಅವರು ಅಮಾನವೀಯವಾಗಿ ಮೃತಪಟ್ಟಿರುವುದು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಹ ದುರ್ಘಟನೆಯಾಗಿದೆ.

ಈ ಹಿನ್ನೆಲೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಮೃತ ಯುವತಿಯ ನಿವಾಸಕ್ಕೆ ಭೇಟಿ ನೀಡಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಒದಗಿಸಲಾದ 8.25 ಲಕ್ಷ ರೂಪಾಯಿ ಪರಿಹಾರ ಧನದ ಆದೇಶ ಪತ್ರವನ್ನು ಕುಟುಂಬಸ್ಥರಿಗೆ ವಿತರಿಸಿದರು. ಬಳಿಕ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಅಧಿಕಾರ ದೀಪನ್.ಎಂ.ಎನ್, ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ, ತಹಶಿಲ್ದಾರ ಚಂದ್ರಶೇಖರ ಹೊಸ್ಮನಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿ‌.ಎಸ್‌ಭಟ್ ಸೇರಿದಂತೆ ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

error: Content is protected !!