ಸ್ತ್ರೀ ಶಕ್ತಿಯೇ ನಮ್ಮ ಬಲ, ನವದುರ್ಗೆಯರ ಆಶೀರ್ವಾದ ನಮ್ಮ ಮೇಲಿದೆ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಂಸಾರವನ್ನು ಕಾಪಾಡುವವಳು ಹೆಣ್ಣು. ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ‌. ಅದರಂತೆ ಉತ್ತಮ ಮಳೆ ಬಂದು ನಾನು ಮತ್ತು ಮುಖ್ಯಮಂತ್ರಿ ಇಬ್ಬರೂ ರಾಜ್ಯದ ನಾಲ್ಕು ಅಣೆಕಟ್ಟುಗಳಿಗೆ ಬಾಗಿನ ಅರ್ಪಿಸಿದ್ದೇವೆ ಎಂದರು.

ದುಃಖದಿಂದ ನಮ್ಮನ್ನು ದೂರ ಮಾಡುವವಳು ದುರ್ಗಾ ದೇವಿ. ಚಾಮುಂಡೇಶ್ವರಿಯ ಆಶೀರ್ವಾದದಿಂದ ತಾಯಂದಿರು, ರೈತರು ಮತ್ತು ರಾಜ್ಯದ ಜನ ಸಂತೋಷವಾಗಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಬಂದು ಕಳೆದ ವರ್ಷ ದೇವಿಗೆ ಗೃಹಲಕ್ಷ್ಮಿ ಹಣದ 2 ಸಾವಿರ ಹಾಗೂ ಒಂದು ವರ್ಷದ ಹಣವನ್ನು ಕಾಣಿಕೆ ಸಲ್ಲಿಸಿದ್ದೆವು. ಎಂದು ಹೇಳಿದರು. ಕಳೆದ ವರ್ಷ ನಾಡಿನ ಸಾಂಸ್ಕೃತಿಕ ಹೆಗ್ಗುರುತು ಹಂಸಲೇಖ ಅವರಿಂದ ಉದ್ಘಾಟನೆ ನೆರವೇರಿಸಲಾಗಿತ್ತು. ಈ ವರ್ಷ ಸಾಹಿತ್ಯ ಲೋಕದ ಪೈಲ್ವಾನ್ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ ನೆರವೇರಿಸಿರುವುದು ಹೆಚ್ಚು ಸಂತಸ ನೀಡಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!