Friday, June 2, 2023

Latest Posts

ಮಹಿಳಾ PSI ಮನೆಗೆ ದುಷ್ಕರ್ಮಿಗಳಿಂದ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಜೆಯ ಮೇಲೆ ಊರಿಗೆ ತೆರಳಿದ್ದ ಮಹಿಳಾ ಪಿಎಸ್‌ಐ ಬಾಡಿಗೆ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವಂತ ಘಟನೆ ಹಾಸನದ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯದಿಂದ ಮನೆಯಲ್ಲಿದ್ದಂತ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಹಾಸನ ಜಿಲ್ಲೆಯ ಅರಕಲಗೂಡಿನ ಕೋಣನೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಶೋಭಾ ಭರಮಕ್ಕನವರ್ ಕರ್ತವ್ಯ ನಿರ್ವಹಿಸುತ್ತಿದ್ದರು.

ಕೋಣನೂರಿನಲ್ಲಿಯೇ ಬಾಡಿಗೆ ಮನೆಯಲ್ಲಿ ವಾಸವಿದ್ದಂತ ಅವರು, ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಬಾಡಿಗೆ ಮನೆಯ ಕಿಟಕಿ ಒಡೆದಿರುವಂತ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಪಿಎಸ್‌ಐ ಶೋಭಾ ಮನೆಯಲ್ಲಿದ್ದಂತ ಲ್ಯಾಪ್ ಟಾವ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪಿಠೋವಕರಣ ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿವೆ.

ರಜೆ ಮುಗಿಸಿ ಮನೆಗೆ ವಾಪಾಸ್ಸಾದಾಗ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವಿಷಯ ತಿಳಿದು ಬಂದಿದೆ. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವಂತ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಘಟನೆಬಗ್ಗೆ ಮಾಹಿತಿ ಪಡೆದ ನಂತರ ಎಸ್‌ಡಿಎಂ, ಎಸ್‌ಡಿಒ ಮತ್ತು ಡಿಎಸ್‌ಪಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!