ಸಂಬಂಧಿಕನಿಂದ ಮಹಿಳೆ ಮೇಲೆ ಅತ್ಯಾಚಾ*ರ: ಆರೋಪಿಯ ಬಂಧನ

ಹೊಸದಿಗಂತ ವರದಿ ವಿಜಯಪುರ: ಮಹಿಳೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನಿಂದಲೇ ಅತ್ಯಾಚಾರ ನಡೆಸಿರುವ ಘಟನೆ ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಶಿವಶಂಕರಪ್ಪ ಸಂಗಪ್ಪ ದೊಡಮನಿ (44) ಎಂದು ಗುರುತಿಸಲಾಗಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದು, ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.