ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಿತಳಾದ ಯುವತಿಯನ್ನು ಹೋಟೆಲ್‌ ಗೆ ಕರೆಸಿ ಅತ್ಯಾಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಡೇಟಿಂಗ್ ಆ್ಯಪ್‌ನಲ್ಲಿ ಭೇಟಿಯಾದ 28 ವರ್ಷದ ಯುವತಿ ಮೇಲೆ ವ್ಯಕ್ತಿಯೊಬ್ಬ ನೈರುತ್ಯ ದೆಹಲಿಯ ದ್ವಾರಕಾದ ಹೋಟೆಲ್‌ವೊಂದರಲ್ಲಿ ಅತ್ಯಾಚಾರವೆಸಗಿದ್ದಾನೆ.
ಹೈದರಾಬಾದ್ ಮೂಲದ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡೇಟಿಂಗ್ ಆ್ಯಪ್‌ನಲ್ಲಿ ಆರೋಪಿಯನ್ನು ಭೇಟಿಯಾದ ನಂತರ ಮೇ 30 ರಂದು ಆ ವ್ಯಕ್ತಿಯೊಂದಿಗೆ ಹೋಟೆಲ್‌ಗೆ ಹೋದಾಗ ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ಜೂನ್ 3 ರಂದು ಸಲ್ಲಿಸಿದ ಪೊಲೀಸ್ ದೂರಿನಲ್ಲಿ ಹೇಳಿದ್ದಾರೆ. ಅಂದಿನಿಂದ ಆರೋಪಿ ತನ್ನ ಕರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಎಂ ಹರ್ಷವರ್ಧನ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!