ರಾಜಸ್ಥಾನದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆ: ಸರ್ಕಾರಿ ನೌಕರಿ, 10 ಲಕ್ಷ ರೂ. ಘೋಷಿಸಿದ ಸಿಎಂ ಗೆಹ್ಲೋಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ 21 ವರ್ಷದ ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿದ್ದು, ಇದೀಗ ಸರ್ಕಾರದಿಂದ ಸಂತ್ರಸ್ತೆಗೆ ನೆರವು ಘೋಷಿಸಲಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರತಾಪ್‌ ಗಢದ ಧರಿಯಾವಾಡದಲ್ಲಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬವನ್ನು ಭೇಟಿ ಮಾಡಿದ್ದು, ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಲಾಗಿದೆ.
ಮಹಿಳೆಗೆ ಸರ್ಕಾರಿ ನೌಕರಿ ನೀಡಲಾಗಿದೆ. ಆಕೆಗೆ 10 ಲಕ್ಷ ರೂ. ಎಫ್.ಡಿ. ಇಡಲಾಗುವುದು ಎಂದು ಘೋಷಿಸಿದ್ದಾರೆ.

ಈ ಪ್ರಕರಣದಲ್ಲಿ, ಎಸ್‌ಐಟಿ ರಚಿಸಲಾಗಿದೆ, 11 ಜನರನ್ನು ಬಂಧಿಸಲಾಗಿದೆ, ನಾನು ಸಂತ್ರಸ್ತೆಯ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಸರ್ಕಾರವು ನಿಮ್ಮೊಂದಿಗೆ ನಿಂತಿದೆ. ನ್ಯಾಯ ಸಿಗುತ್ತದೆ ಎಂದು ಅವರಿಗೆ ಭರವಸೆ ನೀಡಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!