ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ .

ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ಐಪಿಎಸ್ ಅಧಿಕಾರಿ ಗಿರೀಶ್ ನೇಮಕ ಮಾಡಲಾಗಿದೆ. ಜೊತೆಗೆ ಈಗಾಗಲೇ ಪ್ರಕರಣ ಕುರಿತಂತೆ ತನಿಖೆಯನ್ನು ಚುರುಕುಗೊಳಿಸಲಾಗಿದೆ.

ಈ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕಮಲ್ ಅವರಿದ್ದಂತ ನ್ಯಾಯಪೀಠವು ಸ್ವಯಂ ಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದೆ. ಅಲ್ಲದೇ ತನಿಖೆಯ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಭಾರತ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಕರ್ನಾಟಕದಂತಹ ಪ್ರಗತಿಪರ ರಾಜ್ಯದಲ್ಲಿ ಇಂತಹ ಘಟನೆ ಕಳವಳಕಾರಿಯಾಗಿದೆ. ಜೊತೆಗೆ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ಸಂದರ್ಶನ ಬಿತ್ತರಿಸದಂತೆ ನಿರ್ಬಂಧ ಹೇರಲಾಗಿದೆ. ಕೆಲ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ವಿಡಿಯೋ ಬಿತ್ತರಿಸಲಾಗುತ್ತಿದೆ. ಇದರಿಂದ ಸಂತ್ರಸ್ತೆ ಘನತೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ನಿರ್ಬಂಧಿಸಲಾಗಿದೆ. ಆದರೆ, ಘಟನೆಯ ಸುದ್ದಿ ಪ್ರಸಾರಕ್ಕೆ ಯಾವುದೇ ನಿರ್ಬಂಧವಿಲ್ಲ‌ ಎಂದು ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾದ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶಿಸಿದೆ.

ಘಟನೆಗೆ ಸಂಬಂಧಪಟ್ಟಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!