Saturday, January 10, 2026

ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ BJP ಪ್ರತಿಭಟನೆ

ಹೊಸದಿಗಂತ ವರದಿ ಮಂಡ್ಯ:

ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ನಗರದಲ್ಲಿ ಕಳೆದ ಜ. 7ರಂದು ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಅವರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಘಟನೆ ನಾಗರೀಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: FOOD | ರೆಸ್ಟೋರೆಂಟ್ ಸ್ಟೈಲ್ ಮಸಾಲಾ ಎಗ್ ಭುರ್ಜಿ ರೆಸಿಪಿ ಇಲ್ಲಿದೆ!

ಈ ಕೃತ್ಯ ಅಕ್ಷಮ್ಯ ಅಪರಾಧವಾಗಿದೆ. ಮಹಿಳೆಯರಿಗೆ ಪವಿತ್ರ ಸ್ಥಾನ ನೀಡುವ ಈ ಸಮಾಜದಲ್ಲಿ ರಾಜಕೀಯ ದ್ವೇಷಕ್ಕಾಗಿ ಒಬ್ಬ ಮಹಿಳೆ ಎಂಬುದನ್ನೂ ನೋಡದೆ ಸಾರ್ವಜನಿಕವಾಗಿ ದೌರ್ಜನ್ಯ ಎಸಗಲು ಪೊಲೀಸರಿಗೆ ಕುಮ್ಮಕ್ಕು ನೀಡಿದ್ದು ನಾಚಿಕೆಗೇಡಿನ ಸಂಗತಿ. ಪೊಲೀಸ್ ಇಲಾಖೆಯ ಮೇಲೆ ಸರ್ಕಾರದ ನಿಯಂತ್ರಣ ಇಲ್ಲದಿರುವುದು ಇಂದಿನ ಈ ಘಟನೆಗೆ ಸಾಕ್ಷಿಯಾಗಿದೆ ಎಂದು ದೂರಿದರು.

error: Content is protected !!