ಹೊಸದಿಗಂತ ವರದಿ ಹುಬ್ಬಳ್ಳಿ:
ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ವಿಧಾನ ಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: FOOD | ರುಚಿಯಾದ ಮೊಸರು ದೋಸೆ ತಿಂದಿದ್ದೀರಾ? ಇಲ್ಲಾಂದ್ರೆ ಒಮ್ಮೆ ಟ್ರೈ ಮಾಡಿ
ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕ ಅಶೋಕ ಕಾಟವೆ, ತಿಪ್ಪಣ್ಣ ಮಜ್ಜಗಿ, ಶಿವು ಮೆಣಸಿನಕಾಯಿ, ಸೀಮಾ ಮಸೂತಿ, ಚಂದ್ರಿಕಾ ಮೇಸ್ತ್ರಿ, ಸೀಮಾ ಲದ್ವಾ, ಮಹೇಂದ್ರ ಕೌತಾಳ ಸೇರಿದಂತೆ ಅನೇಕರಿದ್ದರು.

