ಹೊಸದಿಗಂತ ವರದಿ, ಮಂಗಳೂರು:
ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕ ಬಂದರಿನಲ್ಲಿ ಮಹಿಳೆ ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಹಿಳೆ ಒಂದು ಬುಟ್ಟಿ ಮೀನು ಕದ್ದಿರುವುದಾಗಿ ಆರೋಪಿಸಿ, ಆಕೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ದೂರು ದಾಖಲಿಸಿ ತನಿಖೆ ಕೈಗೊಂಡ ಮಲ್ಪೆ ಠಾಣಾ ಪೊಲೀಸರು, ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಎಸ್ಪಿ ಡಾ.ಅರುಣ್, ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಡಿಯೋವನ್ನು ಪರಿಶೀಲಿಸಿ, ಅದರಲ್ಲಿ ಮಹಿಳೆಗೆ ಹಲ್ಲೆ ನಡೆಸಿರುವ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಉಳಿದವರ ಪಾತ್ರದ ಬಗ್ಗೆ ವಿಡಿಯೋ ಮೂಲಕ ಪರಿಶೀಲನೆ ಮಾಡಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದವರು ತಿಳಿಸಿದ್ದಾರೆ.