ಕೊಡಗಿನಲ್ಲಿ ರಂಗೇರಿದ ವುಮೆನ್ಸ್ ಡೇ: ಮಹಿಳೆಯರಿಗಾಗಿಯೇ ನಡೆಯಿತು ಕ್ರಿಕೆಟ್ ಮ್ಯಾಚ್!

ಹೊಸದಿಗಂತ ವರದಿ ಸೋಮವಾರಪೇಟೆ :

ಕ್ರೀಡಾ ಕ್ಷೇತ್ರದಲ್ಲೂ ಮಹಿಳೆಯರು ಗಮನಾರ್ಹ ಸಾಧನೆ ಮಾಡುತ್ತಿರುವುದು ಅಭಿನಂದನಾರ್ಹವೆಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹೇಳಿದರು.

ಮಹಿಳಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ಸೋಮವಾರಪೇಟೆ ತಾಲೂಕು ಪಂಚಾಯಿತಿ ಆಶ್ರಯದಲ್ಲಿ ಪಟ್ಟಣದ ಜಿ.ಎಂ. ಪಿ.ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಮಹಿಳೆಯರ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿದ ವೇಳೆ ಅವರು ಮಾತಾಡಿದರು.

ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನಗಳಿವೆ ಎಂದ ಅವರು ಮಹಿಳೆಯರು ಸಬಲರಾದರೆ ದೇಶ ಅಭಿವೃದ್ಧಿಯಾಗುತ್ತದೆ. ಇಂದು ಮಹಿಳೆಯರು ಸಾಮಾಜಿಕ,ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಎಸ್.ಎನ್.ನರಗುಂದ,ಕ್ಷೇತ್ರಶಿಕ್ಷಾಧಿಕಾರಿ ಸುರೇಶ್, ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!