Sunday, January 11, 2026

ಮಹಿಳಾ ರಕ್ಷಣೆ ಸರ್ಕಾರದ ಆದ್ಯತೆಯಾಗಿರಬೇಕು: ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಲಂಚ ಪಡೆದುಕೊಂಡ ಕೆಲಸ ಮಾಡಿಕೊಡುತ್ತಿದ್ದಾರೆ. ಸಿಎಂ ಮನೆಯನ್ನೇ ಭ್ರಷ್ಟಾಚಾರ ಅವರ ಮೂಗಿನ ನೇರಕ್ಕೆ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

ಮಗಳ ಶವ ಪರೀಕ್ಷೆಗೂ ಲಂಚ ಪಡೆದ ಪ್ರಕರಣದಿಂದ ಕರ್ನಾಟಕದ ಮಾನ ರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ರಾಜ್ಯದಲ್ಲಿ ಲಂಚಾವತಾರ ತಾಂಡವವಾಡುತ್ತಿದೆ. ಅಧಿಕಾರಿಗಳು ಹಣ ಕೊಟ್ಟು ಪೋಸ್ಟಿಂಗ್ ಮಾಡಿಕೊಳ್ಳುತ್ತಿದ್ದಾರೆ. ಲಂಚವಿಲ್ಲದೆ ಈ ಸರ್ಕಾರದಲ್ಲಿ ಏನೂ ನಡೆಯುವುದಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಮಹಿಳೆರಿಗೆ ರಕ್ಷಣೆ ಇಲ್ಲವಾಗಿದೆ. ನೀವು ಯಾರನ್ನಾದರೂ ಮುಖ್ಯಮಂತ್ರಿ ಮಾಡಿ, ಆದರೆ, ಮಹಿಳಾ ರಕ್ಷಣೆ ನಿಮ್ಮ ಆದ್ಯತೆಯಾಗಿರಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು. ಕರ್ನಾಟಕದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ಮಹಿಳೆಯರ ಕೊಲೆ, ಬಾಲಕಿಯರ ಮೇಲಿನ ಅತ್ಯಾಚಾರ ನಿರಂತರವಾಗಿ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ 1800ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ದೌರ್ಜನ್ಯ ಆಗಿದೆ. ಮುಖ್ಯಮಂತ್ರಿಗಳ ಜಿಲ್ಲೆಯಲ್ಲೇ ಬಲೂನ್ ಮಾರಾಟಕ್ಕೆ ಬಂದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಆಗಿದೆ. ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ನಡೆಯಿತು.

error: Content is protected !!