ಹೆತ್ತ ತಾಯಿಯನ್ನೇ ಕೊಂದ ಮಗಳು ಸೂಟ್‌ಕೇಸಲ್ಲಿ ಶವಹೊತ್ತು ಪೊಲೀಸ್​ ಠಾಣೆಗೆ ಹಾಜರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೆತ್ತ ತಾಯಿಯನ್ನೇ ಕೊಂದ ಮಗಳು, ಶವವನ್ನು ಸೂಟ್​ಕೇಸ್​ನಲ್ಲಿಟ್ಟು ಪೊಲೀಸ್​ ಠಾಣೆಗೆ ಹೊತ್ತು ತಂದ ಆಘಾತಕಾರಿ ಘಟನೆ ಬೆಂಗಳೂರಿನ ಮೈಕೊಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೀವಾ ಪಾಲ್ (70) ಮಗಳಿಂದಲೇ ಕೊಲೆಯಾದ ದುರ್ದೈವಿ. ಸೆನಾ ಸೇನ್ (39) ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಪಾಪಿ ಮಗಳು. ಆರೋಪಿ ಸೆನಾಲಿ ಸೇನ್, ತಾಯಿ ಬೀವಾ ಪಾಲ್​ ಮತ್ತು ಸೆನಾಲಿ ಅತ್ತೆ ಒಂದೇ ಮನೆಯಲ್ಲಿ ವಾಸವಿದ್ದರು. ಇಬ್ಬರು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದರಂತೆ. ಬೀಗರ ಜಗಳಕ್ಕೆ ಬೇಸತ್ತ ಬೀವಾ ಪಾಲ್, ನಿದ್ರೆ ಮಾತ್ರೆ ನುಂಗಿ ಸಾಯುವುದಾಗಿ ಹೇಳಿದ್ದರಂತೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.

ತಾಯಿ ಹೊಟ್ಟೆ ನೋವು ಎಂದಾಗ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ‍್ಯಾಲಿ ಸೂಟ್‌ಕೇಸ್‌ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟುಕೊಂಡು ಸ್ಟೇಷನ್​ಗೆ ಹೊತ್ತು ತಂದಿದ್ದಾಳೆ.

ಬಿಳೇಕಳ್ಳಿಯ ಎನ್​​ಎಸ್​ಆರ್​ ಗ್ರೀನ್ ಅಪಾರ್ಟ್​ಮೆಂಟ್​ನಿಂದ ತಾಯಿಯ ಮೃತದೇಹವನ್ನು ಹೊತ್ತು ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಸೆನಾಲಿ ಸೇನ್ ಕೃತ್ಯ ಕಂಡು ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್​ಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!