ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಖಾನೆ ಮತ್ತಿತರ ಕಡೆಗಳಲ್ಲಿ ಬೆಳಿಗ್ಗೆ 6 ಗಂಟೆಯ ಮೊದಲು ಹಾಗೂ ಸಂಜೆ 7 ಗಂಟೆಯ ನಂತರ ಮಹಿಳೆಯರಿಂದ ಕೆಲಸ ಮಾಡಿಸಿಕೊಳ್ಳುವಂತಿಲ್ಲ ಎಂದು ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಆದೇಶ ಹೊರಡಿಸಿದೆ.
ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಈ ಆದೇಶ ವನ್ನು ಹೊರಡಿಸಲಾಗಿದ್ದು “ಮಹಿಳೆಯರಿಗೆ ರಾತ್ರಿ ಪಾಳಿ ಮಾಡುವಂತೆ ಒತ್ತಾಯ ಮಾಡುವಂತಿಲ್ಲ. ಮಹಿಳೆಯರ ಲಿಖಿತ ಒಪ್ಪಿಗೆಯಿಲ್ಲದೇ ರಾತ್ರಿ ಕೆಲಸಮಾಡಿಸಿಕೊಳ್ಳಬಾರದು. ಒಂದು ವೇಳೆ ಕೆಲಸ ಮಾಡಿಸಿಕೊಳ್ಳುವುದಾದರೂ ಉಚಿತ ಸಾರಿಗೆ, ಆಹಾರ ಮತ್ತು ಸಾಕಷ್ಟು ಮೇಲ್ವಿಚಾರಣೆಯನ್ನುಒದಗಿಸಬೇಕಾಗುತ್ತದೆ. ಒಂದು ವೇಳೆ ಮಹಿಳಾ ಕಾರ್ಮಿಕರು ನಿರಾಕರಿಸಿದರೆ ಅವರನ್ನು ಕೆಲಸದಿಂದ ವಜಾಗೊಳಿಸುವಂತಿಲ್ಲ” ಎಂದು ಉತ್ತರ ಪ್ರದೇಶದ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.