ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ತಾಯಿ ಕವಿತಾ (27) ಹಾಗೂ ಪುತ್ರಿ ನಿಹಾರಿಕಾ(5) ಮೃತ ದುರ್ದೈವಿಗಳು.
ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ನಿವಾಸಿಯಾಗಿದ್ದು, ತಾಲೂಕಿನ ಕೆರೆಬಿಳಚಿ ಬಳಿಯ ಸೂಳೆಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಶುಕ್ರವಾರದಿಂದ ಕವಿತಾ ಹಾಗೂ ಪುತ್ರಿ ನಿಹಾರಿಕ ಕಾಣೆಯಾಗಿದ್ದರು ಎಂದು ಪತಿ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದರು. ಇಂದು ಸೂಳೆಕೆರೆಯಲ್ಲಿ ತಾಯಿ ಮಗುವಿನ ಶವ ಸಿಕ್ಕಿದೆ.
ಕವಿತಾ ಅವರ ಪತಿ ಮಂಜುನಾಥ್ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಪತಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕವಿತಾಳ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.