ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಶ್ರೇಷ್ಠರು, ಯುವ ಸಮೂಹಕ್ಕೆ ಸ್ಫೂರ್ತಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ 11 ವರ್ಷಗಳ ಎನ್‌ಡಿಎ ಆಡಳಿತ ಸಾಮರ್ಥ್ಯ ಮತ್ತು ಸಾಧನೆಗೆ ಮಹಿಳಾ ನೇತೃತ್ವದಲ್ಲಿ ಹೊಸ ರೂಪ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎನ್‌ಡಿಎ ಸರ್ಕಾರ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಕ್ರೀಡೆ, ಸೇನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತೀಯ ಮಹಿಳೆಯರು ಅಪ್ರತಿಮ ಯಶಸ್ಸು ಸಾಧಿಸುತ್ತಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ. ಈ ಸಾಧನೆಗಳು ಇತರರಿಗೆ ಮಾದರಿಯಾಗಿವೆ ಎಂದೂ ಅವರು ಹೇಳಿದ್ದಾರೆ.

ಸ್ವಚ್ಛ ಭಾರತ್, ಜನ್ ಧನ್, ಉಜ್ವಲಾ ಯೋಜನೆ, ಮುದ್ರಾ, ಪಿಎಂ ಆವಾಸ್ ಯೋಜನೆ, ಬೇಟಿ ಬಚಾವೋ-ಬೇಟಿ ಪಡಾವೋ ಸೇರಿದಂತೆ ಅನೇಕ ಯೋಜನೆಗಳು ಮಹಿಳಾ ಸಬಲೀಕರಣ ಹಾಗೂ ಅಭಿವೃದ್ಧಿಗೆ ಸಹಕಾರಿಯಾಗಿವೆ ಎಂದು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಗರ್ಭಿಣಿಯರ ಮರಣ ಪ್ರಮಾಣ 2011–13ರಲ್ಲಿ ಲಕ್ಷಕ್ಕೆ 167 ಇತ್ತು, ಅದು 2019–21ರಲ್ಲಿ 93ಕ್ಕೆ ಇಳಿದಿದೆ. 2019ರಲ್ಲಿ 3.23 ಕೋಟಿ ಮನೆಗಳಿಗೆ ಮಾತ್ರ ನೀರಿನ ಸಂಪರ್ಕವಿದ್ದರೆ, 2025ರ ಮೇ ವೇಳೆಗೆ ಅದು 15.64 ಕೋಟಿಗೆ ಏರಿಕೆಯಾಗಿದೆ. ಉಜ್ವಲ ಯೋಜನೆಯಡಿ 10 ಕೋಟಿ ಮನೆಗಳಿಗೆ ಗ್ಯಾಸ್ ಸಂಪರ್ಕ ನೀಡಲಾಗಿದೆ.

ಬಡವರು, ರೈತರು, ನಿರ್ಗತಿಕರು ಹಾಗೂ ಯುವಕರಿಗಾಗಿ ಎನ್‌ಡಿಎ ಸರ್ಕಾರ ಹಮ್ಮಿಕೊಂಡ ಯೋಜನೆಗಳನ್ನೂ ಮೋದಿ ಅವರು ಪ್ರಸ್ತಾಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!