Wednesday, July 6, 2022

Latest Posts

ರಾತ್ರಿ ಗಸ್ತಿಗೆ ಮಹಿಳಾ ಸಿಬ್ಬಂದಿ: ಪೊಲೀಸ್ ಇಲಾಖೆ ಕ್ರಮಕ್ಕೆ ಜನತೆ ಖುಷ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾತ್ರಿ ಗಸ್ತಿಗೆ ಮಹಿಳಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಕಾನೂನು ಪಾಲನೆ, ರಕ್ಷಣೆಯ ವಿಚಾರದಲ್ಲಿ ಇಲಾಖೆಯ ಯಾವುದೇ ಸಿಬ್ಬಂದಿಗಳೂ ಕಡಿಮೆ ಇಲ್ಲ ಎಂದು ಪೊಲೀಸ್ ಇಲಾಖೆ ತೋರಿಸಿಕೊಟ್ಟಿದೆ.
ಮಹಿಳಾ ಪೊಲೀಸ್ ಸಿಬ್ಬಂದಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಾತ್ರಿ ವೇಳೆ ಖುದ್ದು ರಸ್ತೆಗಿಳಿದು ಗಸ್ತಿನಲ್ಲಿ ತೊಡಗಿಕೊಂಡಿದ್ದು, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪಿಎಸ್‌ಐ ಸುಮಾ ಅವರ ನೇತೃತ್ವದಲ್ಲಿ ತಡರಾತ್ರಿ ವೇಳೆ ಆಯಕಟ್ಟಿನ ಸ್ಥಳಗಳಲ್ಲಿ ನಿಂತು ಕಾನೂನು ಪಾಲನೆ, ವಾಹನ ತಪಾಸಣೆ ನಡೆಸುತ್ತಿರುವ ಪೊಲೀಸರನ್ನು ಕಂಡು ಹೆಮ್ಮೆ ಎನಿಸುತ್ತಿದೆ ಎಂದು ನಾಗರಿಕರು ಪ್ರತಿಕ್ರಿಯಿಸಿದ್ದಾರೆ.
ಇಲಾಖಾ ಮೂಲಗಳ ಪ್ರಕಾರ ಇದೇ ಮೊದಲ ಬಾರಿಗೆ ಮಹಿಳಾ ಸಿಬ್ಬಂದಿಯನ್ನು ಭಟ್ಕಳದಲ್ಲಿ ರಾತ್ರಿ ಗಸ್ತು ಕಾರ್ಯಕ್ಕೆ ನಿಯೋಜನೆ ಮಾಡಲಾಗುತ್ತಿದೆ. ಇದಕ್ಕೂ ಮುನ್ನ ರಾತ್ರಿ ಕರ್ತವ್ಯಕ್ಕೆ ಮಹಿಳಾ ಸಿಬ್ಬಂದಿಯನ್ನು ಕೇವಲ ಠಾಣೆಯಲ್ಲಿ ಮಾತ್ರ ನಿಯೋಜನೆ ಮಾಡುತ್ತಿತ್ತು. ಇದೀಗ ಮಹಿಳಾ ಸಿಬ್ಬಂದಿಗಳಿಗೆ ಇಲಾಖೆ ಇನ್ನಷ್ಟು ಹೆಚ್ಚಿನ ಜವಾಬ್ದಾರಿ ನೀಡಿ ಬೆನ್ತಟ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss