ಮಹಿಳೆಯರ ‘ಸಿಂಧೂರ’ ಅಳಿಸಿದ ಪಾಕ್‌ಗೆ ಮಹಿಳೆಯರಿಂದಲೇ ಸುದ್ದಿಗೋಷ್ಠಿ ನಡೆಸಿ ‘ಮಂಗಳಾರತಿ’!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್ ದಾಳಿಯಲ್ಲಿ 26 ಮಹಿಳೆಯರ ಸಿಂಧೂರ ಅಳಿಸಿದ ಪಾಕ್‌ಗೆ ಆಪರೇಷನ್ ಸಿಂಧೂರ ಮೂಲಕ ತಿರುಗೇಟು ನೀಡಿದ್ದಲ್ಲದೆ, ಈ ದಾಳಿಯ ಮಾಹಿತಿಯನ್ನು ಸಶಸ್ತ್ರ ಪಡೆಗಳ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳ ಬಳಿಯಿಂದಲೇ ಕೊಡಿಸಿ ಭಾರತವು ಪಾಕ್ ಮುಖಕ್ಕೆ ‘ಮಂಗಳಾರತಿ’ ಮಾಡಿದೆ!

ದಾಳಿಯ ಬಳಿಕ ಭಾರತದ ವಿದೇಶಾಂಗ ಸಚಿವಾಲಯ ನಡೆಸಿದ ಸುದ್ದಿಗೋಷ್ಠಿಯಲ್ಲಿ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಜೊತೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಕರ್ನಲ್ ಸೋಫಿಯಾ ಖುರೇಷಿ ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಿದ್ದರು.

ಈ ಪೈಕಿ ವಿಂಗ್ ಕಮಾಂಡರ್ ವ್ಯೂಮಿಕಾ ಸಿಂಗ್, 2004ರ ಡಿ.18ರಲ್ಲಿ ಭಾರತೀಯ ವಾಯುಪಡೆಗೆ ನಿಯೋಜನೆಗೊಂಡಿದ್ದಾರೆ. ಪ್ರಸ್ತುತ ಅತ್ಯುತ್ತಮ ವಿಂಗ್ ಕಮಾಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. ಚೀತಾ, ಚೇತಕ್‌ನಂತಹ ಯುದ್ಧ ಹೆಲಿಕಾಪ್ಟರ್‌ಗಳನ್ನು ಹಾರಿಸುವಲ್ಲಿ ಪರಿಣತಿ ಹೊಂದಿದ್ದಾರೆ.

ಇನ್ನು ಕರ್ನಲ್ ಸೋಫಿಯಾ ಖುರೇಷಿ, ಭಾರತೀಯ ಸೇನೆಯ ಸಿಗ್ನಲ್ಸ್ ದಳದ ಅಽಕಾರಿಯಾಗಿದ್ದಾರೆ. 2016ರಲ್ಲಿ ಬಹುರಾಷ್ಟ್ರೀಯ ಮಿಲಿಟರಿ ವ್ಯಾಯಾಮದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿಯಾಗಿ ಕೂಡಾ ಅವರು ದಾಖಲೆ ಸೃಷ್ಟಿಸಿದ್ದರು. ಭಾರತ ಆಯೋಜಿಸಿದ್ದ ಅತಿದೊಡ್ಡ ವಿದೇಶಿ ಮಿಲಿಟರಿ ಕವಾಯತಿನಲ್ಲಿ ಅವರು ಭಾರತದ ತಂಡವನ್ನು ಮುನ್ನಡೆಸಿದ್ದರಲ್ಲದೇ ಪಾಲ್ಗೊಂಡಿದ್ದ 18 ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!