Monday, August 15, 2022

Latest Posts

ಮಹಿಳೆಯರು- ಮಕ್ಕಳ ಅನೈತಿಕ ಸಾಗಾಣಿಕೆ ತಡೆಗೆ ನಿಗಾ ವಹಿಸಿ: ಅಧಿಕಾರಿಗಳಿಗೆ ಡಿಸಿ ಅಶ್ವತಿ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮಂಡ್ಯ:

ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲ್ಯ ವಿವಾಹ ನಿಷೇದ ಕಾಯ್ದೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ(ಮಾನವ ಸಾಗಾಣಿಕೆ) ತಡೆಗಟ್ಟುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ನಾಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಿಗಾ ವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಸಂಬಂಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿದರು.
2020-21 ನೇ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳ ಪರಿಶೀಲನೆ ನಡೆಸಿದರು.
ಮಾನವ ಸಾಗಾಣಿಕೆ ಸಂಬಂಧ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾವಲು ಸಮಿತಿ ಸದಸ್ಯರಿಗೆ ಪರಿಣಾಮಕಾರಿಯಾಗಿ ತರಬೇತಿ ನೀಡಿ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss