ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಇಸ್ಲಾಂವುದ್ದೀನ್ ಎಂಬುವನನ್ನು ಬಂಧಿಸಲಾಗಿದೆ.
ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿ ಆರೋಪಿ ಪರಾರಿ ಆಗುತ್ತಿದ್ದ. ರಸ್ತೆಯಲ್ಲಿ ಓಡಾಡುವ ಮಹಿಳೆಯರೇ ಈತನ ಟಾರ್ಗೆಟ್ ಆಗಿದ್ದರು. ಬ್ಯಾಡ್ ಟಚ್ ಮಾಡಿ ಬೈಕ್ ನಲ್ಲಿ ಪರಾರಿ ಆಗುತ್ತಿದ್ದ.
ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದ ಈತ, ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಿರುಕುಳ ನೀಡಿ ಪರಾರಿಯಾಗಿದ್ದ ಮಹಿಳೆ ನೀಡಿದ ದೂರಿನ ಮೇರೆಗೆ ಬನಶಂಕರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.