ತೆಲಂಗಾಣ ಹನಮಕೊಂಡದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತೆಲಂಗಾಣದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಮದ್ಯದ ಪಾರ್ಟಿ ನಡೆಸುತ್ತಿರುವ ವಿಡಿಯೋವೊಂದು ಹೊರಬಿದ್ದಿದೆ. ತೆಲಂಗಾಣದ ಹನಮಕೊಂಡ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಹನಮಕೊಂಡದ ಸರ್ಕಾರಿ ಹೆರಿಗೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಆಸ್ಪತ್ರೆ ಆವರಣದಲ್ಲಿ ಮದ್ಯ ಸೇವಿಸುತ್ತಿರುವ ದೃಶ್ಯವನ್ನು ರೋಗಿಯ ಸಂಬಂಧಿಯೊಬ್ಬರು ಸೆರೆ ಹಿಡಿದಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆಸ್ಪತ್ರೆ ಸಿಬ್ಬಂದಿ ವಿರುದ್ಧ ರೋಗಿಗಳಿಂದ ಹಲವಾರು ದೂರುಗಳು ಬಂದಿವೆ. ಸಿಬ್ಬಂದಿಗಳು ಜಾಗೃತವಾಗಿ ಕಾರ್ಯನಿರ್ವಹಿಸುವುದನ್ನು ಬಿಟ್ಟು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಆವರಣದಲ್ಲಿ ನಡೆಯುವ ಪಾರ್ಟಿಗಳಲ್ಲಿ ಮದ್ಯ ಸೇವಿಸಿ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.

ಎಣ್ಣೆ ಪಾರ್ಟಿ ಮಾಡುತ್ತಿದ್ದವರಲ್ಲಿ ಒಬ್ಬ ನರ್ಸ್‌, ಆರೋಗ್ಯಶ್ರೀ ಕಾರ್ಯಕರ್ತೆ, ಸ್ಟಾಫ್‌ ನರ್ಸ್‌ ಮತ್ತು ಇಬ್ಬರು ಹೊರಗಿನವು ಸೇರಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here