Sunday, August 14, 2022

Latest Posts

ಮಹಿಳೆಯರು ಸಂಘಟನೆಗಳ ಮೂಲಕ ಮುಖ್ಯವಾಹಿನಿಗೆ ಬರಬೇಕು: ಶಾಸಕ ಕೆ.ಜಿ.ಬೋಪಯ್ಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಮಹಿಳೆಯರು ಸಂಘಟನೆಗಳ ಮೂಲಕ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವುದರೊಂದಿಗೆ ಸ್ವಾವಲಂಬಿಗಳಾಗಿ ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
ವೀರಾಜಪೇಟೆ ಬಳಿಯ ಆರ್ಜಿ ಗ್ರಾಮ ಪಂಚಾಯತ್ ಆವರಣದಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟಕ್ಕೆ ಕೇಂದ್ರ ಸರ್ಕಾರದ ಪುರಸ್ಕೃತ ಹಾಗೂ ಸರಕಾರದ ಕೃಷಿ ಯಾಂತ್ರೀಕರಣ ಉಪಯೋಜನೆ ಅಡಿಯಲ್ಲಿ ಟ್ರ್ಯಾಕ್ಟರ್ ಮತ್ತು ಕಳೆನಾಶಕ‌ ಯಂತ್ರ ವಿತರಿಸಿ ಅವರು ಮಾತನಾಡಿದರು.
ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು    ಜೀವನದಲ್ಲಿ ಸಾಧಿಸುವ ಛಲದೊಂದಿಗೆ ಮುನ್ನಡೆಯಬೇಕೆಂಬ ಉದ್ದೇಶದಿಂದ ಉಚಿತವಾಗಿ ಟ್ರ್ಯಾಕ್ಟರ್ ನೀಡಲಾಗಿದೆ. ಮಹಿಳೆಯರು ಸಂಘಟನೆಯೊಂದಿಗೆ ಮುಖ್ಯವಾಹಿನಿಗೆ ಬರಬೇಕೆಂದು ಬೋಪಯ್ಯ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿದೇರ್ಶಕರ ಶ್ರೀಕಂಠ ಮೂರ್ತಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ,    ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷ ಉಪೇಂದ್ರ,    ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜನ್, ಪಂಚಾಯತ್ ಸದಸ್ಯರಾದ ಬೋಪಣ್ಣ, ಸಹದ್ದೀರ್ ಆಲಿ,    ಕೆ.ಟಿ.ಬಶೀರ್,    ಸುನೀತಾ, ಕವಿತಾ, ಫಾತಿಮಾ, ಯಾಂಜಿ ವಿಟ್ಟ,    ಜೋಸೆಫ್, ಜಿಲ್ಲಾ ಪಂಚಾಯತ್ ಡಿಪಿಎಂ ಕುಮಾರ್, ಮಹಿಳಾ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss