ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದಂಪತಿಗಳು ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಸಲಹೆ ನೀಡಿದ ಬೆನ್ನಲ್ಲೇ, ವಿಜಯನಗರದ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲ ನಾಯ್ಡು, ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ತಲಾ 50,000 ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಅದ್ರಲ್ಲೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ರೆ ನನ್ನ ಸ್ವಂತ ವೇತನದಲ್ಲಿ 50,000 ರೂ., ಗಂಡು ಮಗುವಿಗೆ ಜನ್ಮ ನೀಡಿದ್ರೆ 1 ಹಸುವನ್ನು ಉಡಗೊರೆಯಾಗಿ ಕೊಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ತಮ್ಮ ಸಂಬಳದಿಂದ ನಗದು ಪ್ರೋತ್ಸಾಹಧನ ನೀಡುವುದಾಗಿ ಹೇಳಿದ್ದಾರೆ. ಅಪ್ಪಲ ನಾಯ್ಡು ಈ ಘೋಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸಚಿವರ ಕೊಡುಗೆಯನ್ನು ಮಹಿಳೆಯರು ಪ್ರಶಂಸಿಸಿದ್ದಾರೆ. ಮುಖ್ಯಮಂತ್ರಿ ನಾಯ್ಡು ಕೂಡಾ ಅಪ್ಪಾ ನಾಯ್ಡು ಅವರನ್ನು ಶ್ಲಾಘಿಸಿದ್ದಾರೆ.
ಇತ್ತೀಚಿಗೆ ದಕ್ಷಿಣ ಭಾರತದಲ್ಲಿ ಕ್ಷೀಣಿಸುತ್ತಿರುವ ಜನಸಂಖ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಚಂದ್ರಬಾಬು ನಾಯ್ಡು, ಮಕ್ಕಳ ಸಂಖ್ಯೆ ಲೆಕ್ಕಿಸದೆ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಹೆರಿಗೆಯ ಸಮಯದಲ್ಲಿ ಹೆರಿಗೆ ರಜೆ ನೀಡಲಾಗುವುದು ಎಂದು ಶನಿವಾರ ಘೋಷಿಸಿದ್ದರು.