ನಾಳೆ ಮಹಿಳಾ ಏಷ್ಯಾಕಪ್​ ಫೈನಲ್​: ಪ್ರಶಸ್ತಿಗಾಗಿ ಭಾರತ-ಶ್ರೀಲಂಕಾ ಮುಖಾಮುಖಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಏಷ್ಯಾಕಪ್​ ಫೈನಲ್​ ಪಂದ್ಯ ನಾಳೆ ನಡೆಯಲಿದ್ದು, ಹಾಲಿ ಚಾಂಪಿಯನ್​ ಭಾರತ ಮತ್ತು ಶ್ರೀಲಂಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.
7 ಬಾರಿಯ ಚಾಂಪಿಯನ್​ ಭಾರತವೇ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ.

ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. 6ನೇ ಪ್ರಯತ್ನದಲ್ಲಾದರೂ ಲಂಕಾ ಪ್ರೋಫಿ ಗೆಲ್ಲಬಹುದೇ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

ಸಂಭಾವ್ಯ ತಂಡಗಳು

ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!