ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಕ್ಷಣಗಣನೆ ಆರಂಭಗೊಂಡಿದ್ದು, ನಾಳೆ(ಶುಕ್ರವಾರ) ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ಮುಖಾಮುಖಿಯಾಗಲಿದೆ.
ಇನ್ನು ಇದೇ ದಿನ ರಾತ್ರಿ ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಶ್ರೀಲಂಕಾದ ಡಂಬುಲದಲ್ಲಿ ಪಂದ್ಯಾವಳಿ ನಡೆಯಲಿದೆ.
7 ಬಾರಿ ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಪ್ರಭುತ್ವ ಸ್ಥಾಪಿಸಿರುವ ಭಾರತ ಈ ಬಾರಿಯೂ ಕಪ್ ಗೆಲ್ಲುವ ಫೇವರಿಟ್ ಆಗಿದೆ. ಅದರಲ್ಲೂ ಮೊದಲ ಪಂದ್ಯದಲ್ಲಿಯೇ ಪಾಕ್ ವಿರುದ್ಧ ಆಡುತ್ತಿದ್ದಾರೆ.
2018ರಲ್ಲಿ ಮಲೇಷ್ಯಾದಲ್ಲಿ ನಡೆದಿದ್ದ 7ನೇ ಆವೃತ್ತಿಯ ಫೈನಲ್ನಲ್ಲಿ ಭಾರತಕ್ಕೆ ಬಾಂಗ್ಲಾದೇಶದ 3 ವಿಕೆಟ್ ಅಂತರದ ಆಘಾತಕಾರಿ ಸೋಲುಣಿಸಿ ಚೊಚ್ಚಲ ಏಷ್ಯಾ ಕಪ್ ಗೆದ್ದು ಸಂಭ್ರಮಿಸಿತ್ತು. ಈ ಒಂದು ಆವೃತ್ತಿ ಬಿಟ್ಟರೆ ಉಳಿದೆಲ್ಲ ಆವೃತ್ತಿಯಲ್ಲಿಯೂ ಭಾರತವೇ ಕಪ್ ಗೆದ್ದು ಪಾರುಪತ್ಯ ಸಾಧಿಸಿದೆ.
ಉಭಯ ತಂಡಗಳು
ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.
ಪಾಕಿಸ್ತಾನ: ನಿದಾ ದಾರ್ (ನಾಯಕಿ), ಇರಾಮ್ ಜಾವೇದ್, ಸಾದಿಯಾ ಇಕ್ಬಾಲ್, ಅಲಿಯಾ ರಿಯಾಜ್, ಡಯಾನಾ ಬೇಗ್, ಫಾತಿಮಾ ಸನಾ, ಗುಲ್ ಫಿರೋಜಾ, ಮುನೀಬಾ ಅಲಿ, ಸಿದ್ರಾ ಅಮೀನ್, ನಜಿಹಾ ಅಲ್ವಿ, ಸೈಯದಾ ಅರೂಬ್ ಶಾ, ನಶ್ರಾ ಸುಂಧು, ತಸ್ಮಿಯಾ ರುಬಾಬ್, ಒಮೈಮಾ ಸೊಹೈಲ್, ತುಬಾ ಹಸನ್