ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಶಫಾಲಿ ವರ್ಮಾ(81) ಅವರ ಪ್ರಚಂಡ ಬ್ಯಾಟಿಂಗ್ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಭಾರತ ತಂಡ ನೇಪಾಳ ವಿರುದ್ಧ 82 ರನ್ಗಳ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಹಂತಕ್ಕೇರಿದೆ.
ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿನಡೆದ ಅಂತಿಮ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಬಿರುಸಿನ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ಗೆ 178 ರನ್ ಪೇರಿಸಿತು.
ಗುರಿ ಬೆನ್ನಟ್ಟಿದ ನೇಪಾಳ 9 ವಿಕೆಟ್ಗೆ 96 ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.