Wednesday, August 17, 2022

Latest Posts

ಮಹಿಳಾ ಕ್ರಿಕೆಟ್​ ಬ್ಯಾನ್ ಮಾಡಿದ್ರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ಟೆಸ್ಟ್​ ಆಡಲ್ಲ: ತಾಲಿಬಾನ್​ಗೆ ​ಆಸ್ಟ್ರೇಲಿಯಾ ಎಚ್ಚರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕ್ರಿಕೆಟ್ ಸೇರಿದಂತೆ ಇತರೆ ಕ್ರೀಡೆಗಳನ್ನು ಆಡಲು ಅನುಮತಿ ನೀಡುವುದಿಲ್ಲ ಎಂದು ತಾಲಿಬಾನ್​ ಈಗಾಗಲೇ ಕಟ್ಟಪ್ಪಣೆ ಹೊರಡಿಸಿದೆ. ಈ ಕುರಿತು ಕ್ರಿಕೆಟ್​ ಆಸ್ಟ್ರೇಲಿಯಾ ಅಸಮಾಧಾನ ವ್ಯಕ್ತಪಡಿಸಿದೆ.
ಒಂದು ವೇಳೆ ತಾಲಿಬಾನ್​​ ಮಹಿಳಾ ಕ್ರಿಕೆಟ್​ ಬ್ಯಾನ್ ಮಾಡಿದ್ರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ನಡೆಯಬೇಕಿರುವ ಏಕೈಕ ಟೆಸ್ಟ್​ ಪಂದ್ಯದಲ್ಲೂ ಭಾಗಿಯಾಗುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ.
ಈ ಕುರಿತಾಗಿ ಟ್ವಿಟರ್​​ನಲ್ಲಿ ಮಾಹಿತಿ ಹಂಚಿಕೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಜಾಗತಿಕವಾಗಿ ಮಹಿಳೆಯರು ಎಲ್ಲ ವಿಭಾಗಗಳಲ್ಲೂ ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಕ್ರಿಕೆಟ್ ಸೇರಿದಂತೆ ಎಲ್ಲ ವಿಭಾಗದ ಕ್ರೀಡೆಗಳಲ್ಲಿ ಅವರನ್ನು ಬೆಂಬಲಿಸುವುದು ಆಸ್ಟ್ರೇಲಿಯಾದ ಆದ್ಯ ಕರ್ತವ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ​​ ಮಹಿಳಾ ಕ್ರಿಕೆಟ್​ಗೆ ನಿಷೇಧ ಹೇರಿದರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ಟೆಸ್ಟ್​ ಕ್ರಿಕೆಟ್​ ಆಡುವುದಿಲ್ಲ. ಈ ಟೆಸ್ಟ್​ ಪಂದ್ಯ ರದ್ದುಗೊಳಿಸಬೇಕಾಗುತ್ತದೆ ಎಂದು ತಿಳಿಸಿದೆ.
ನವೆಂಬರ್​ ತಿಂಗಳಲ್ಲಿ ಅಫ್ಘಾನಿಸ್ತಾನದೊಂದಿಗೆ ಹೋಬರ್ಟ್​​ನಲ್ಲಿ ಆಸ್ಟ್ರೇಲಿಯಾ ಐತಿಹಾಸಿಕ ಏಕೈಕ ಟೆಸ್ಟ್​ ಪಂದ್ಯ ಆಯೋಜಿಸಿದೆ. ಇದೀಗ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಗಳನ್ನು ಆಡಲು ಅವಕಾಶವಿಲ್ಲ ಎಂದು ತಾಲಿಬಾನ್ ಆದೇಶ ಹೊರಡಿಸುತ್ತಿದ್ದಂತೆ ಕಾಂಗರೂ ದೇಶ ಈ ನಿರ್ಧಾರ ಕೈಗೊಂಡಿದೆ.
ಕಳೆದ ಎರಡು ದಿನಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದರ ಬೆಳವಣಿಗೆಯ ನಡುವ ಮಹಿಳೆಯರು ಕ್ರಿಕೆಟ್ ಆಡುವುದು ಅನಿವಾರ್ಯವಲ್ಲ. ಕ್ರಿಕೆಟ್​ನಲ್ಲಿ ಅವರು ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿ ಎದುರಿಸಬಹುದು. ಇಸ್ಲಾಂ ಮಹಿಳೆಯರನ್ನು ನೋಡಲು ಅನುಮತಿಸುವುದಿಲ್ಲ ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!