April 16, 2026
Thursday, April 16, 2026
spot_img

ಸಂಸತ್‌ನಲ್ಲಿ ನಾರಿಶಕ್ತಿ ಸಂಚಲನ: 543 ರಿಂದ 850ಕ್ಕೇರಲಿದೆ ಲೋಕಸಭಾ ಸೀಟುಗಳ ಸಂಖ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯರಿಗೆ ರಾಜಕೀಯ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಶೇ. 33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಸಲುವಾಗಿ ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಶೇ. 50 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ಕುರಿತು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದರು.

ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು 850ಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಇದರಲ್ಲಿ ರಾಜ್ಯಗಳಿಂದ 815 ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 35 ಸದಸ್ಯರು ಇರಲಿದ್ದಾರೆ.

ಒಟ್ಟು 815 ಸ್ಥಾನಗಳ ಪೈಕಿ 272 ಸ್ಥಾನಗಳು ಮಹಿಳೆಯರಿಗಾಗಿಯೇ ಮೀಸಲಿರಲಿವೆ. ಇದು ಸದನದ ಒಟ್ಟು ಬಲದ ಮೂರನೇ ಒಂದು ಭಾಗವಾಗಲಿದೆ.

‘ನಾರಿಶಕ್ತಿ ವಂದನ್ ಅಧಿನಿಯಮ್’ ಅಡಿಯಲ್ಲಿ ಸಂವಿಧಾನದ 131ನೇ ತಿದ್ದುಪಡಿ ಮಸೂದೆ 2026 ಹಾಗೂ ಕ್ಷೇತ್ರ ಮರುವಿಂಗಡಣೆ ಮಸೂದೆ 2026 ಅನ್ನು ಮಂಡಿಸಲಾಗಿದೆ.

ಸೀಟುಗಳ ಸಂಖ್ಯೆ ಹೆಚ್ಚಳವಾಗುವುದರಿಂದ ಯಾವುದೇ ರಾಜ್ಯಗಳಿಗೂ ರಾಜಕೀಯವಾಗಿ ನಷ್ಟವಾಗುವುದಿಲ್ಲ, ಬದಲಿಗೆ ಪ್ರಾತಿನಿಧ್ಯ ಹೆಚ್ಚಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

2023ರಲ್ಲೇ ಈ ಮಸೂದೆಗೆ ಅನುಮೋದನೆ ಸಿಕ್ಕಿತ್ತಾದರೂ, 2026ರ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆಯ ನಂತರ ಇದನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !