ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಏಕದಿನ ವಿಶ್ವಕಪ್ ನಲ್ಲಿಂದು ಸ್ಮೃತಿ ಮಂಧಾನ(80) ಮತ್ತು ಪ್ರತೀಕಾ ರಾವಲ್(75) ಅವರ ಆಕರ್ಷಕ ಅರ್ಧಶತಕ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ 330 ರನ್ ಗಳಿಸಿ ಸವಾಲೊಡ್ಡಿದೆ.
ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಭಾರತ, ದಿಟ್ಟ ಬ್ಯಾಟಿಂಗ್ ಮೂಲಕ ಉತ್ತಮ ರನ್ ಕಲೆ ಹಾಕಿತು. 48.5 ಓವರ್‌ಗಳಲ್ಲಿ 330ರನ್‌ಗೆ ಆಲೌಟ್ ಆಯಿತು.
ಆಸೀಸ್ ಬೌಲರ್‌ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಮಂಧಾನ ಮತ್ತು ರಾವಲ್ 24 ಓವರ್ ತನಕ ಬ್ಯಾಟಿಂಗ್ ನಡೆಸಿ ಮೊದಲ ವಿಕೆಟ್‌ಗೆ 155 ರನ್ ಕಲೆ ಹಾಕಿದರು.
18 ರನ್ ಪೂರ್ತಿಗೊಳಿಸುತ್ತಿದ್ದಂತೆ ಮಹಿಳಾ ಏಕದಿನ ಕ್ರಿಕೆಟ್ ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಜತೆಗೆ ಏಕದಿನದಲ್ಲಿ 5 ಸಾವಿರ ರನ್ ಪೂರ್ತಿಗೊಳಿಸಿದರು. ಒಟ್ಟು 66 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 80 ರನ್ ಗಳಿಸಿದರು. ಪ್ರತೀಕಾ ರಾವಲ್ 75 ರನ್ ಬಾರಿಸಿದರು.
ಹರ್ಮನ್‌ಪ್ರೀತ್ ಕೌರ್(22) ಈ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾದರು. ಹರ್ಲಿನ್ ಡಿಯೋಲ್(38), ರಿಚಾ ಘೋಷ್(32) ಮತ್ತು ಜೆಮೀಮಾ ರೋಡಿಗ್ರಸ್(33) ರನ್ ಬಾರಿಸಿ ತಂಡದ ಬೃಹತ್ ಮೊತ್ತಕ್ಕೆ ನೆರವಾದರು.