ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ರೋಚಕ ಗೆಲುವು ದಾಖಲು ಮಾಡಿದ್ದು, ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಲಗ್ಗೆ ಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆರಿಬಿಯನ್ ತಂಡ ನಿಗದಿತ 50 ಓವರ್ಗಳಲ್ಲಿ 6 ವಿಕೆಟ್ನಷ್ಟಕ್ಕೆ 225ರನ್ಗಳಿಕೆ ಮಾಡಿತು.
226ರನ್ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ ಆರಂಭದಲ್ಲೇ 12ರನ್ಗಳಿಸಿದ್ದ ಹಿಲ್ ವಿಕೆಟ್ ಕಳೆದುಕೊಂಡಿತು. ಇದರ ಬೆನ್ನಲ್ಲೇ ಕ್ಯಾಪ್ಟನ್ ನೈಟ್ 5ರನ್, ಸಿವರ್ 2, ಜಾನ್ಸ್ 1 ರನ್ಗಳಿಕೆ ಮಾಡಿ ನಿರಾಸೆ ಮೂಡಿಸಿದರು.
ಕೊನೆಯದಾಗಿ ಇಂಗ್ಲೆಂಡ್ ತಂಡ ತನ್ನೆಲ್ಲ ವಿಕೆಟ್ ಕಳೆದುಕೊಂಡು 218ರನ್ಗಳಿಕೆ ಮಾಡುವಲ್ಲಿ ಮಾತ್ರ ಯಶಸ್ವಿಯಾಯಿತು.
ಈ ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಲಗ್ಗೆ ಹಾಕಿದೆ.