Friday, March 24, 2023

Latest Posts

ವುಮೆನ್ಸ್‌ ಪ್ರೀಮಿಯರ್ ಲೀಗ್: ಡೆಲ್ಲಿ ಕ್ಯಾಪಿಟಲ್ಸ್ ಎದುರು ಬೆಂಗಳೂರಿಗೆ ಸೋಲು!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ವುಮೆನ್ಸ್‌ ಪ್ರೀಮಿಯರ್ ಲೀಗ್‌ನ ಇಂದಿನ ಪಂದ್ಯದಲ್ಲಿ ಸ್ಮೃತಿ ಮಂಧನಾ ನೇತೃತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು, ಡೆಲ್ಲಿ ಕ್ಯಾಪಿಟಲ್ಸ್ ಎದುರು ಹೀನಾಯ ಸೋಲು ಅನುಭವಿಸಿದೆ.

ಬ್ರೆಬೋರ್ನ್‌ ಮೈದಾನದಲ್ಲಿ ನಡೆದ ಸೂಪರ್ ಸಂಡೇಯ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 234 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ನಾಯಕ ಸ್ಮೃತಿ ಮಂಧನಾ ಹಾಗೂ ಸೂಫಿ ಡಿವೈನ್‌ 4.2 ಓವರ್‌ಗಳಲ್ಲಿ 41 ರನ್‌ಗಳ ಜತೆಯಾಟವಾಡಿತು.ಆದ್ರೆ ಸೋಫಿ ಡಿವೈನ್‌ ಕೇವಲ 14 ರನ್ ಬಾರಿಸಿ ಶಫಾಲಿ ವರ್ಮಾ ಅವರ ಅದ್ಭುತ ಕ್ಯಾಚ್‌ಗೆ ವಿಕೆಟ್‌ ಒಪ್ಪಿಸಿದರು.

ಸ್ಮೃತಿ ಮಂಧನಾ ಕೂಡಾ 23 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 35 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಆಸ್ಟ್ರೇಲಿಯಾ ಮೂಲದ ಎಲೈಸಿ ಪೆರ್ರಿ ಕೇವಲ 19 ಎಸೆತಗಳಲ್ಲಿ 5 ಬೌಂಡರಿ ಸಹಿತ 31 ರನ್‌ ಬಾರಿಸಿ ತಾರಾ ನೋರಿಸ್‌ಗೆ ವಿಕೆಟ್‌ ಒಪ್ಪಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಿತು. 89 ರನ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡಿದ್ದ ಆರ್‌ಸಿಬಿ ತನ್ನ ಖಾತೆಗೆ 7 ರನ್‌ ಸೇರಿಸುವಷ್ಟರಲ್ಲಿ 5 ವಿಕೆಟ್‌ ಕಳೆದುಕೊಂಡು ಆಘಾತಕ್ಕೊಳಗಾಯಿತು.

ಕೇವಲ 96 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಹೀನಾಯ ಸೋಲಿನತ್ತ ಮುಖ ಮಾಡಿದ್ದ ಆರ್‌ಸಿಬಿ ತಂಡಕ್ಕೆ 8ನೇ ವಿಕೆಟ್‌ಗೆ ಹೀಥರ್ ನೈಟ್‌ ಹಾಗೂ ಮೆಘನ್ ಶುಟ್‌ 56 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಕೊನೆಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಹೀಥರ್ ನೈಟ್‌ ಕೇವಲ 21 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 2 ಆಕರ್ಷಕ ಸಿಕ್ಸರ್ ಸಹಿತ 34 ರನ್ ಬಾರಿಸಿ ತಾರಾ ನೋರಿಸ್‌ಗೆ ಐದನೇ ಬಲಿಯಾದರು. ಇನ್ನು ಮೆಘನ್ ಶುಟ್‌ 22 ರನ್ ಬಾರಿಸಿ ಅಜೇಯರಾಗುಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!