ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ ವುಮೆನ್ಸ್ ಪ್ರೀಮಿಯರ್ ಲೀಗ್ ಫೀವರ್ ಶುರು ಆಗಲಿದ್ದು, ಈಗಾಗಲೇ ಎಲ್ಲ ಸಿದ್ಧತೆ ನಡೆದಿದೆ.
ಈ ಬಾರಿ ಟೂರ್ನಿ ಉದ್ಘಾಟನೆಗೆ ಬಾಲಿವುಡ್ ಬಾದ್ಶಾ ಶಾರುಖ್ಖಾನ್ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮಾರ್ಚ್ 17 ರಂದು ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೆ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಒಟ್ಟಾರೆ ಐದು ತಂಡಗಳು ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ಮೊದಲು ಪಂದ್ಯ ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ ಪಂದ್ಯ ಆಡಲಿವೆ.