Sunday, January 11, 2026

WPL 2026 | ಇಂದಿನಿಂದ ಮಹಿಳಾ ಪ್ರೀಮಿಯರ್‌ ಲೀಗ್‌: ಫಸ್ಟ್‌ ಮ್ಯಾಚ್‌ ಯಾರ ಮಧ್ಯೆ? ಎಷ್ಟೊತ್ತಿಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

4ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಪಂದ್ಯ ಜನವರಿ 9 ರಿಂದ ಆರಂಭ ಆಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಸೆಣಸಲಿವೆ.

ಇಂದು ಸಂಜೆ 6:30 ರಿಂದ ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, 7:30ಕ್ಕೆ ಪಂದ್ಯ ಶುರುವಾಗಲಿದೆ.

2025 ರಲ್ಲಿ ಮುಂಬೈ ಇಂಡಿಯನ್ಸ್‌ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ರೆ, 2024ರಲ್ಲಿ ಆರ್‌ಸಿಬಿ ಟ್ರೋಫಿ ಗೆದ್ದಿದೆ. ಕಳೆದ ಬಾರಿ ಬೆಂಗಳೂರು ತಂಡ ಸೋಲನುಭವಿಸಿ ಲೀಗ್‌ ಸುತ್ತಿನಲ್ಲೇ ಟೂರ್ನಿಯಿಂದ ಹೊರಬಿದ್ದಿದ್ದು, 2026 ರಲ್ಲಿ ಕಪ್ ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ಮುಂಬೈ ಇಂಡಿಯನ್ಸ್‌ ನಡೆದ ಮೂರು ಸೀಸನ್‌ಗಳಲ್ಲಿ ಎರಡು ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಆರ್‌ಸಿಬಿ ಒಂದು ಬಾರಿ ಗೆದ್ದಿದೆ. ಈ ಬಾರಿ 4ನೇ ಆವೃತ್ತಿಯಲ್ಲಿ ಟ್ರೋಫಿ ಗೆಲ್ಲುವ ಸಾಲಿನಲ್ಲಿ ಇವೆರಡು ತಂಡಗಳ ಹೆಸರುಗಳು ಮುಂಚೂಣಿಯಲ್ಲಿವೆ.

ಇನ್ನೂ ಈ ಬಾರಿ ಇವರೆಡು ತಂಡಗಳನ್ನು ಹೊರತುಪಡಿಸಿ ಉಳಿದ 3 ತಂಡಗಳಿಗೆ ಹೊಸ ನಾಯಕಿಯರನ್ನ ಆಯ್ಕೆ ಮಾಡಲಾಗಿದೆ. ಒಟ್ಟು 5 ಟೀಂ ಗಳು ಟ್ರೋಫಿಗಾಗಿ ಕಾದಾಟ ನಡೆಸಲಿವೆ.

error: Content is protected !!