Thursday, March 23, 2023

Latest Posts

ವುಮೆನ್ಸ್ ಪ್ರೀಮಿಯರ್ ಲೀಗ್​: ಮುಂಬೈ ಇಂಡಿಯನ್ಸ್ ನ ನಾಯಕಿಯಾಗಿ ಕೌರ್ ಆಯ್ಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಾರ್ಚ್ 4 ರಿಂದ ವುಮೆನ್ಸ್ ಪ್ರೀಮಿಯರ್ ಲೀಗ್​ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸ್ ಹರ್ಮನ್​ಪ್ರೀತ್ ಕೌರ್ ಅವರನ್ನು ತಂಡದ ನಾಯಕಿಯಾಗಿ ಆಯ್ಕೆ ಮಾಡಿದೆ.

ಟೀಮ್ ಇಂಡಿಯಾ ಪರ 151 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಹರ್ಮನ್​ಪ್ರೀತ್ ಕೌರ್ ಪ್ರಸ್ತುತ ಭಾರತ ತಂಡದ ನಾಯಕಿಯಾಗಿದ್ದಾರೆ. ಇದೇ ಕಾರಣದಿಂದಾಗಿ ಸ್ಟಾರ್ ಆಟಗಾರ್ತಿಯನ್ನೇ ಮುಂಬೈ ಇಂಡಿಯನ್ಸ್ ನಾಯಕಿಯಾಗಿ ಆಯ್ಕೆ ಮಾಡಿದೆ.

ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ 136 ಇನಿಂಗ್ಸ್ ಆಡಿರುವ ಹರ್ಮನ್​ 1 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 3058 ರನ್​ ಕಲೆಹಾಕಿದ್ದಾರೆ.

ಇಲ್ಲಿ ವಿಶೇಷ ಎಂದರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪುರುಷರ ತಂಡವನ್ನು ಮುನ್ನಡೆಸುತ್ತಿದ್ದರೆ, ಇದೀಗ ಭಾರತ ಮಹಿಳಾ ತಂಡ ನಾಯಕಿ ಹರ್ಮನ್​ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ವುಮೆನ್ಸ್ ಟೀಮ್​ನ ಕ್ಯಾಪ್ಟನ್ ಆಗಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾದ ನಾಯಕ-ನಾಯಕಿ ಮುಂಬೈ ಇಂಡಿಯನ್ಸ್​ ತಂಡದ ಸಾರಥ್ಯವಹಿಸಿದಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!