ಮಹಿಳಾ ಪ್ರೀಮಿಯರ್ ಲೀಗ್​ : ಇಂದಿನ ಪಂದ್ಯದಲ್ಲಿ ಮುಂಬೈ- ಆರ್​ಸಿಬಿ ಮುಖಾಮುಖಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ (WPL) ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ತಂಡ ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ (MIW vs RCBW) ತಂಡವನ್ನು ಎದುರಿಸಲು ಸಜ್ಜಾಗಿದೆ.

ಇಂದು ಸಂಜೆ 07:30 PM ಕ್ಕೆ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಆರ್​ಸಿಬಿ-ಮುಂಬೈ ಕದನ ಏರ್ಪಡಿಸಲಾಗಿದೆ. ಮೊದಲ ಪಂದ್ಯದಲ್ಲಿ 200+ ರನ್ ಕಲೆಹಾಕಿ ಭರ್ಜರಿ ಫಾರ್ಮ್​ ನೀಡಿರುವ ಎಂಐ ತಂಡದ ಎದುರು ಬೆಂಗಳೂರು ಯಾವರೀತಿ ಪ್ರದರ್ಶನ ನೀಡುತ್ತೆ ಎಂಬುದು ನೋಡಬೇಕಿದೆ.

ಕಳೆದ ರಾತ್ರಿ ನವಿ ಮುಂಬೈನ ಡಾ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ತಂಡ, ಗುಜರಾತ್ ಜೈಂಟ್ಸ್ ತಂಡವನ್ನು 143 ರನ್ಗಳ ಬೃಹತ್ ಅಂತರದಿಂದ ಸೋಲಿಸಿತು. ಈ ಪಂದ್ಯದಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಬಿರುಸಿನ ಅರ್ಧಶತಕ ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!