ಹೊಸದಿಗಂತ ಡಿಜಿಟಲ್ ಡೆಸ್ಕ್:
ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತನ್ನ ತಂಡದ ತರಬೇತಿ ಬಳಗವನ್ನು ಪ್ರಕಟಿಸಿದೆ.
ಮಾರ್ಚ್ ತಿಂಗಳಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ (ಡಬ್ಲ್ಯುಪಿಎಲ್) ನಡೆಯಲಿದ್ದು, ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಚಾರ್ಲೋಟ್ ಎಡ್ವರ್ಡ್ಸ್ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಪದ್ಮಶ್ರೀ-ಅರ್ಜುನ ಪ್ರಶಸ್ತಿ ವಿಜೇತೆ ಹಾಗೂ ಭಾರತ ತಂಡದ ಮಾಜಿ ವೇಗಿ ಜೂಲನ್ ಗೋಸ್ವಾಮಿ ತಂಡದ ಮೆಂಟರ್ ಮತ್ತು ಬೌಲಿಂಗ್ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಭಾರತದ ಮಾಜಿ ಆಲ್ರೌಂಡರ್ ದೇವಿಕಾ ಪಾಲ್ಶಿಕಾರ್ ಬ್ಯಾಟಿಂಗ್ ಕೋಚ್ ಹಾಗೂ ತೃಪ್ತಿ ಚಂದಗಡ್ಕರ್ ಭಟ್ಟಾಚಾರ್ಯ ತಂಡದ ಮ್ಯಾನೇಜರ್ ಆಗಿ ನೇಮಕಗೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ನೀತಾ ಅಂಬಾ, ಚಾರ್ಲೋಟ್ ಎಡ್ವರ್ಡ್ಸ್, ಜೂಲನ್ ಗೋಸ್ವಾಮಿ ಮತ್ತು ದೇವಿಕಾ ಪಾಲ್ಶಿಕಾರ್ ಅವರನ್ನು ಮುಂಬೈ ಇಂಡಿಯನ್ಸ್ ಕುಟುಂಬಕ್ಕೆ ಸ್ವಾಗತಿಸಲು ನಾನು ಸಂಭ್ರಮಿಸುತ್ತಿದ್ದೇನೆ. ಹೆಚ್ಚು ಹೆಚ್ಚು ಮಹಿಳೆಯರು ಕ್ರೀಡೆಯಲ್ಲಿ ಕೇವಲ ಆಟಗಾರ್ತಿಯರಾಗಿ ಮಾತ್ರವಲ್ಲದೆ, ಕೋಚ್ಗಳು, ಆಡಳಿತಾಧಿಕಾರಿಗಳು ಮತ್ತು ತರಬೇತಿ ಸಿಬ್ಬಂದಿಯಾಗಿ ತೊಡಗಿಸಿಕೊಳ್ಳುತ್ತಿರುವುದು ಅಮೋಘವೆನಿಸುತ್ತಿದೆ. ಭಾರತದಲ್ಲಿ ಮಹಿಳಾ ಕ್ರೀಡೆಗೆ ಇದೊಂದು ಉತ್ಸಾಹದ ಸಮಯವಾಗಿದೆ. ನಮ್ಮ ಮಹಿಳಾ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿರಂತರವಾಗಿ ದೇಶಕ್ಕೆ ಗೌರವ ತಂದುಕೊಡುತ್ತಿದ್ದಾರೆ. ಕ್ರೀಡಾ ಶಕ್ತಿಯ ಮೂಲಕ ಹೆಚ್ಚಿನ ಸಂತಸ ಮತ್ತು ಸಂಭ್ರಮವನ್ನು ತಂದುಕೊಡಲು ಮಹಿಳೆಯರಿಗೆ ಇನ್ನಷ್ಟು ಶಕ್ತಿ ಲಭಿಸಲಿ. ಈ ಮೂಲಕ ಸಬಲೀಕರಣಗೊಂಡ ಮಹಿಳೆಯರ ಹೊಸ ತಲೆಮಾರಿಗೆ ಹೆಚ್ಚಿನ ಸ್ಫೂರ್ತಿ ಸಿಗುವಂತಾಗಲಿ. ಉನ್ನತ ಮಟ್ಟವನ್ನು ತಲುಪಲು ಅವರಿಗೆ ಸಾಧ್ಯವಿರುವ ಎಲ್ಲ ಬೆಂಬಲಗಳನ್ನು ಒದಗಿಸಲು ನಾವು ಯಾವಾಗಲೂ ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.