ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯ ವೇಳಾಪಟ್ಟಿ ಪ್ರಕಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಸಿಸಿಐಯು ಇಂದು ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳಿಸಿದೆ.

ಮೊದಲ ಆವೃತ್ತಿ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿ ಮಾರ್ಚ್ 4 ರಂದು ಆರಂಭಗೊಳ್ಳುತ್ತಿದೆ. ಎಲ್ಲಾ ಪಂದ್ಯಗಳು ಮುುಂಬೈನಲ್ಲಿ ನಡೆಯಲಿದೆ. ಮುಂಬೈನ ಡಿವೈ ಪಾಟೀಲ್ ಹಾಗೂ ಬ್ರೇಬೋರ್ನ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿ ಆಯೋಜಿಸಲಾಗಿದೆ.

ಉದ್ಘಾಟನಾ ಪಂದ್ಯದಲ್ಲಿ ಮಹಿಳಾ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿಯಾಗುತ್ತಿದೆ. ಎರಡನೇ ದಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ , ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಹೋರಾಟ ನಡೆಸಲಿದೆ.
ಮಾರ್ಚ್ 26 ರಂದು ಬ್ರೇಬೋರ್ನ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯ ಆಯೋಜಿಸಲಾಗಿದೆ.

ಮಾರ್ಚ್ 5ರ ಭಾನುವಾರ, ಮಾರ್ಚ್ 18ರ ಶನಿವಾರ ಹಾಗೂ ಮಾರ್ಚ್ 23ರ ಮಂಗಳವಾರ ಡಬಲ್ ಹೆಡ್ಡರ್ ಪಂದ್ಯ ಆಯೋಜಿಸಲಾಗಿದೆ. ಫೈನಲ್ ಪಂದ್ಯ ಸೇರಿ ಒಟ್ಟು 23 ಪಂದ್ಯಗಳು ನಡೆಯಲಿದೆ. ಚೊಚ್ಚಲ ಪ್ರಶಸ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಜ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಹೋರಾಟ ನಡೆಸಲಿದೆ.

ನಿನ್ನೆ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯ ಚೊಚ್ಚಲ ಹರಾಜು ಪ್ರಕ್ರಿಯೆ ನಡಿದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!