ಮಹಿಳಾ ಪ್ರೀಮಿಯರ್ ಲೀಗ್: ಟೂರ್ನಿಯ ಅಧಿಕೃತ ಗೀತೆ ಬಿಡುಗಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಪ್ರೀಮಿಯರ್ ಲೀಗ್ ಇನ್ನೇನು ಆರಂಭಕ್ಕೆ ಕೆಲವೇ ಕ್ಷಣ ಬಾಕಿ ಉಳಿದಿದ್ದು, ಇದಕ್ಕೂ ಮುನ್ನ ಟೂರ್ನಿಯ ಅಧಿಕೃತ ಗೀತೆಯನ್ನು ಬಿಡುಗಡೆ ಮಾಡಲಾಗಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗೀತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಖ್ಯಾತ ಗಾಯಕ ಶಂಕರ್ ಮಹಾದೇವನ್, ನೀತಿ ಮೋಹನ್ ಮತ್ತು ಹರ್ದೀಪ್ ಕೌರ್ ಅವರು ‘ಯೇ ತೋ ಬಾಸ್ ಶುರುವಾತಿ ಹೈ’ ಗೀತೆಗೆ ಧ್ವನಿ ನೀಡಿದ್ದಾರೆ.

ಎರಡು ನಿಮಿಷಗಳ ಈ ವಿಡಿಯೋದಲ್ಲಿ ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಸ್ನೇಹ್​ ರಾಣಾ ಸೇರಿದಂತೆ ಹಲವು ಕ್ರಿಕೆಟ್​ ಆಟಗಾರ್ತಿಯರು ಕಾಣಿಸಿಕೊಂಡಿದ್ದಾರೆ ಮಹಿಳಾ ಕ್ರಿಕೆಟ್ ಬೆಳವಣಿ ತೋರುವ ರೀತಿಯಲ್ಲಿ ಈ ಗೀತೆಯಲ್ಲಿ ಚಿತ್ರಿಸಲಾಗಿದೆ.

ಉದ್ಘಾಟನಾ ಸಮಾರಂಭ ತಡವಾದ ಕಾರಣ ಪಂದ್ಯ 8 ಗಂಟೆಗೆ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!