Thursday, August 11, 2022

Latest Posts

ಬಜೆಟ್’ಗೂ ಮುನ್ನ ಸಿಎಂ ನಿವಾಸದ ಎದುರು ಮಹಿಳೆಯರ ಪ್ರತಿಭಟನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸಿಎಂ ಬಿ.ಎಸ್. ಯಡಿಯೂರಪ್ಪ ಅವರು 8ನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದ್ದು, ಇಂದು ಪಂಚಮಸಾಲಿ ಸಮುದಾಯದ ನೂರಾರು ಮಹಿಳೆಯರು ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್ ನೇತೃತ್ವದಲ್ಲಿ ಮಹಿಳೆಯರು ಸಿಎಂ ಅವರ ಕಾವೇರಿ ನಿವಾಸದ ಎದುರು ಜಮಾಯಿಸಿ, ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ನಿರತ ಮಹಿಳೆಯರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss