April 14, 2026
Tuesday, April 14, 2026
spot_img

ಮಹಿಳಾ ಮೀಸಲಾತಿ ದೇಶದ ಭವಿಷ್ಯಕ್ಕೆ ಮಹತ್ವದ ಹೆಜ್ಜೆ: ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯರಿಗೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳಾ ಮೀಸಲಾತಿ ಒಂದು ಐತಿಹಾಸಿಕ ನಿರ್ಧಾರವಾಗಿದೆ ಎಂದು ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನಗರದ ಪುರಭವನದಲ್ಲಿ ನಾರಿ ಶಕ್ತಿ ಫೋರಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕಾಯ್ದೆ ಮಹಿಳೆಯರ ಪಾತ್ರವನ್ನು ಇನ್ನಷ್ಟು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ, ಆರ್ಥಿಕತೆ, ರಕ್ಷಣಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಲಾಗಿದೆ. ಈಗ ರಾಜಕೀಯ ಕ್ಷೇತ್ರದಲ್ಲಿಯೂ ಸಮಾನ ಪ್ರಾತಿನಿಧ್ಯ ನೀಡುವ ಮೂಲಕ ದೇಶ ನಿರ್ಮಾಣದ ಜವಾಬ್ದಾರಿಯನ್ನು ಮಹಿಳೆಯರಿಗೂ ಹಂಚಲಾಗುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, 2047ರೊಳಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿಸಲು ಮಹಿಳೆಯರ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಹೇಳಿದರು. ದೇಶದ ಜನಸಂಖ್ಯೆಯಲ್ಲಿ ಅರ್ಧಕ್ಕಿಂತ ಹೆಚ್ಚು ಮಹಿಳೆಯರೇ ಇರುವುದರಿಂದ ಅವರಿಗೆ ಸಾಮಾಜಿಕ ನ್ಯಾಯ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂಬುದು ಸರ್ಕಾರದ ಉದ್ದೇಶ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !