ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಮಹಿಳೆಯರು ಅಧಿಕಾರದಲ್ಲಿ ಇದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. 2028ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು. ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ ಎಂದರು.
ಸೋನಿಯಾ ಗಾಂಧಿ ನಾಯಕತ್ವದಲ್ಲಿ, ಮನಮೋಹನ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಲು ಹೋಗಿತ್ತು. ಕಾರಣಾಂತರಗಳಿಂದ ಆ ಮಹತ್ವದ ಕಾರ್ಯ ಜಾರಿಗೆ ಬರಲಿಲ್ಲ. ಈಗ ಆ ಮೀಸಲಾತಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಮುಂದಿನ ವಿಧಾನಸಭಾ, ಲೋಕಸಭಾ ಚುನಾವಣೆಗೆ ಮಹಿಳಾ ಮೀಸಲಾತಿ ಇರುತ್ತದೆ ಎಂದರು.