ಬಸ್‌ ಸೀಟಿಗಾಗಿ ಮಹಿಳೆಯರ ಚಪ್ಪಲಿ ಹೊಡೆದಾಟ, ಜಗಳ ಬಿಡಿಸೋಕೆ ಯಾರೂ ಬರ್ತಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸರ್ಕಾರಿ ಬಸ್ಸಿನಲ್ಲಿ ಸೀಟ್‌ ವಿಚಾರಕ್ಕೆ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಮಹಿಳೆಯರು ಹತ್ತಿದ್ದಾರೆ. ಈ ವೇಳೆ ಸೀಟ್ ನನ್ನದು ನನ್ನದು ಅಂತಾ ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ.

ಮೊದಲಿಗೆ ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ನಂತರ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದಾರೆ. ಈ ವೇಳೆ ವೇಳೆ ಅಡ್ಡ ಬಂದ ಬಾಲಕಿಗೂ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ. 

ಮಹಿಳೆಯರ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!