ಮಹಿಳಾ ಟಿ20 ಏಷ್ಯಾಕಪ್​: ಫೈನಲ್​ಗೆ ಲಗ್ಗೆಯಿಟ್ಟ ಭಾರತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಟಿ20 ಏಷ್ಯಾಕಪ್​ ಟೂರ್ನಿಯಲ್ಲಿ ಹಾಲಿ ಚಾಂಪಿಯನ್​ ಭಾರತ ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ.

ಇಂದು(ಶುಕ್ರವಾರ) ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 10 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್​ಗೆ ಪ್ರವೇಶಿಸಿದೆ.
ಅತ್ತ ಫೈನಲ್​ನಲ್ಲಿ ಪಾಕಿಸ್ತಾನ ಅಥವಾ ಲಂಕಾ ಮ್ಯಾಚ್ ಯಿಂದ ಗೆದ್ದ ಬಂದ ತಂಡವನ್ನು ಎದುರಿಸಲಿದೆ.

ಶುಕ್ರವಾರ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 80 ರನ್​ ಬಾರಿಸಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ 11 ಓವರ್​ಗಳಲ್ಲಿ ಯಾವುದೇ ವಿಕೆಟ್​ ನಷ್ಟವಿಲ್ಲದೆ 83 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!