October 7, 2026
Wednesday, October 7, 2026
spot_img

ಮಹಿಳಾ ಟಿ20 ಏಷ್ಯಾಕಪ್ | ಬಾಂಗ್ಲಾದೇಶದ ವಿರುದ್ಧ 40 ರನ್‌ಗಳ ಭರ್ಜರಿ ಜಯ: ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಟಿ20 ಏಷ್ಯಾಕಪ್‌ನ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ತಂಡವನ್ನು 40 ರನ್‌ಗಳಿಂದ ಮಣಿಸಿದ ಭಾರತ ಮಹಿಳಾ ತಂಡ ಅಜೇಯವಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

2026ರ ಮಹಿಳಾ ಟಿ20 ಏಷ್ಯಾಕಪ್ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 40 ರನ್‌ಗಳಿಂದ ಮಣಿಸಿದ ಭಾರತ ಅಜೇಯವಾಗಿ ಫೈನಲ್ ಪ್ರವೇಶಿಸಿದೆ.

ಇದನ್ನೂ ಓದಿ:

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 149 ರನ್ ಗಳಿಸಿತು. ಶಫಾಲಿ ವರ್ಮಾ 40 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್‌ಗಳೊಂದಿಗೆ 64 ರನ್ ಸಿಡಿಸಿದರು. ಪ್ರತಿಕಾ ರಾವಲ್ 20, ರಿಚಾ ಘೋಷ್ 21 ರನ್ ಗಳಿಸಿದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ 24 ರನ್‌ಗಳೊಂದಿಗೆ ಅಜೇಯರಾಗುಳಿದರು.

150 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶಕ್ಕೆ ಭಾರತದ ಬೌಲರ್‌ಗಳು ಯಾವುದೇ ಅವಕಾಶ ನೀಡಲಿಲ್ಲ. ದಿಲಾರಾ ಅಖ್ತರ್ 21, ನಿಗರ್ ಸುಲ್ತಾನಾ 19 ಹಾಗೂ ಸೋಭಾನಾ ಮೊಸ್ತರಿ 18 ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಅಂತಿಮವಾಗಿ ಬಾಂಗ್ಲಾದೇಶ 20 ಓವರ್‌ಗಳಲ್ಲಿ 109 ರನ್‌ಗಳಿಗೆ ಆಲೌಟ್ ಆಗಿ 40 ರನ್‌ಗಳ ಸೋಲು ಕಂಡಿತು. ಭಾರತದ ಪರ ದೀಪ್ತಿ ಶರ್ಮಾ 3 ವಿಕೆಟ್ ಕಬಳಿಸಿ ಮಿಂಚಿದರು. ಈ ಗೆಲುವಿನೊಂದಿಗೆ ಭಾರತ ಟೂರ್ನಿಯಲ್ಲಿ ಅಜೇಯವಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

Must Read