ಮಹಿಳೆಯರ ಟಿ20 ವಿಶ್ವಕಪ್‌: ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದು ಆಸ್ಟ್ರೇಲಿಯಾ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಿಳೆಯರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ. ಟಾಸ್‌ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್‌ ಇಳಿದಿದೆ

ಪೂಜಾ ವಸ್ತ್ರಾಕರ್‌ ಅನಾರೋಗ್ಯದಲ್ಲಿದ್ದಾರೆ. ಅವರ ಬದಲು ಸ್ನೇಹ ರಾಣಾ ತಂಡಕ್ಕೆ ಬಂದಿದ್ದಾರೆ. ತಂಡದಲ್ಲಿ ಇನ್ನೂ ಒಂದು ಬದಲಾವಣೆ ಇದೆ. ರಾಜೇಶ್ವರಿ ಗಾಯಕ್ವಾಡ್‌ ಬದಲಿಗೆ ರಾಧಾ ಯಾದವ್‌ ಸ್ಥಾನ ಪಡೆದಿದ್ದಾರೆ.

ಲೀಗ್‌ ಹಂತದಲ್ಲಿ ಆಸ್ಟ್ರೇಲಿಯಾ ತಂಡ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಭಾರತ ತಂಡ ಆಡಿದ ನಾಲ್ಕು ಪಂದ್ಯದಲ್ಲಿ 3ರಲ್ಲಿ ಗೆದ್ದು ಗುಂಪಿನ 2ನೇ ಸ್ಥಾನಿಯಾಗಿ ಸೆಮಿಫೈನಲ್‌ ಹಂತಕ್ಕೇರಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!