ಮಹಿಳೆಯರ ಟಿ20 ವಿಶ್ವಕಪ್ ವೇಳಾಪಟ್ಟಿ ರಿಲೀಸ್: ಅ.6ಕ್ಕೆಇಂಡೋ- ಪಾಕ್ ಮ್ಯಾಚ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

2024ರ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 4 ರಂದು ಸಿಲ್ಹೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತದ ಅಭಿಯಾನ ಪ್ರಾರಂಭವಾಗಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ತಿಳಿಸಿದೆ.

ಮಹಿಳೆಯರ ಟಿ20 ವಿಶ್ವಕಪ್‌ ಗೆ ಬಾಂಗ್ಲಾದೇಶ ಆತಿಥ್ಯವಹಿಸುತ್ತಿದ್ದು, ಅಕ್ಟೋಬರ್ 3 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಇದೀಗ ಈ ಮಿನಿ ವಿಶ್ವಸಮರದ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ (ICC) ಇಂದು ಬಿಡುಗಡೆ ಮಾಡಿದೆ.

ಪಂದ್ಯಾವಳಿಯಲ್ಲಿ ಆಡುತ್ತಿರುವ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದರೆ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ.

 ಮಹಿಳೆಯರ ಟಿ20 ವಿಶ್ವಕಪ್ ಈ ವರ್ಷದ ಅಕ್ಟೋಬರ್ 3 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಢಾಕಾದಲ್ಲಿ ನಡೆಯಲಿದೆ. ಎಲ್ಲಾ ತಂಡಗಳು ತಮ್ಮ ತಮ್ಮ ಗುಂಪುಗಳಲ್ಲಿ ತಲಾ 4 ಪಂದ್ಯಗಳನ್ನು ಆಡಲಿವೆ. ಈ ಟೂರ್ನಿಯ ಅಂತಿಮ ಪಂದ್ಯ ಅಕ್ಟೋಬರ್ 20 ರಂದು ನಡೆಯಲಿದೆ.

2 ಗುಂಪುಗಳು ಹೀಗಿವೆ
ಗುಂಪು ಎ- ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಕ್ವಾಲಿಫೈಯರ್ 1.

ಗುಂಪು ಬಿ- ಬಾಂಗ್ಲಾದೇಶ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಕ್ವಾಲಿಫೈಯರ್ 2.

ಟೀಂ ಇಂಡಿಯಾ ವೇಳಾಪಟ್ಟಿ
ಟಿ20 ವಿಶ್ವಕಪ್​ನಲ್ಲಿ ಭಾರತ ಮಹಿಳಾ ತಂಡವು ಅಕ್ಟೋಬರ್ 4 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇದಾದ ನಂತರ ಟೀಂ ಇಂಡಿಯಾದ ಎರಡನೇ ಪಂದ್ಯ ಅಕ್ಟೋಬರ್ 6 ರಂದು ಪಾಕಿಸ್ತಾನದ ವಿರುದ್ಧ ನಡೆಯಲಿದೆ. ಇದರ ನಂತರ, ಭಾರತ ತಂಡವು ಅಕ್ಟೋಬರ್ 9 ರಂದು ಕ್ವಾಲಿಫೈಯರ್ 1 ತಂಡದೊಂದಿಗೆ ಸೆಣಸಾಡಲಿದೆ. ಆ ನಂತರ ಅಕ್ಟೋಬರ್ 13 ರಂದು ಆಸ್ಟ್ರೇಲಿಯಾ ವಿರುದ್ಧ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!